ಮಂಡ್ಯ: ಸಕ್ಕರೆ ನಾಡು ಮಂಡ್ಯದ (Mandya) ರೈತರ ಜೀವನಾಡಿಯಾಗಿರುವ ಸರ್ಕಾರಿ ಸ್ವಾಮ್ಯದ ಮೈಶುಗರ್ ಸಕ್ಕರೆ ಕಾರ್ಖಾನೆ ಪ್ರಸಕ್ತ ಹಂಗಾಮಿನ ಕಬ್ಬು ಅರೆಯುವಿಕೆಯನ್ನು ದಿಢೀರ್ ಸ್ಥಗಿತಗೊಳಿಸಿದೆ. ಮುಂದಿನ ಹಂಗಾಮಿನವರೆಗೆ ಕಾರ್ಖಾನೆ ಕಾರ್ಯನಿರ್ವಹಿಸುವುದಿಲ್ಲ ಎಂದು ಆಡಳಿತ ಮಂಡಳಿ ತಿಳಿಸಿದ್ದು, ಕಬ್ಬು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ.