ಬೆಂಗಳೂರು: ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯಾ ಪ್ರಕರಣ ಸಂಬಂಧ ರಚಿಸಲಾಗಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ನೂತನ ಮುಖ್ಯಸ್ಥ ಹಾಗೂ ಸದಸ್ಯರನ್ನು ನೇಮಿಸಿ ರಾಜ್ಯ ಸರ್ಕಾರ ಗುರುವಾರ ಆದೇಶಿಸಿದೆ. ಎಸ್ಐಟಿ ಮುಖ್ಯಸ್ಥರಾಗಿದ್ದ ಐಜಿಪಿ ಶಶಿಕುಮಾರ್ ಅವರ ನಿರ್ಗಮನದಿಂದ ತೆರವಾಗಿದ್ದ ಸ್ಥಾನಕ್ಕೆ ಸಿಐಡಿ ಐಜಿಪಿ ಚೇತನ್ ಸಿಂಗ್ ರಾಥೋಡ್ ನೇಮಕವಾಗಿದ್ದಾರೆ.