ನ್ಯೂಜಿಲೆಂಡ್‌ನ ಕ್ರೈಸ್ಟ್‌ಚರ್ಚ್‌ನ ಹ್ಯಾಗ್ಲಿ ಓವಲ್‌ನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್‌ನ ಮೂರನೇ ದಿನ ಈ ಘಟನೆ ನಡೆದಿದೆ. ಬ್ಯಾಟಿಂಗ್ ಮಾಡುತ್ತಿದ್ದ ಆಕಾಶ್ ದೀಪ್‌ಗೆ ನ್ಯೂಜಿಲೆಂಡ್ ವೇಗಿ ಕೈಲ್ ಜೇಮಿಸನ್ ಎಸೆದ ಬೌನ್ಸರ್‌ಗಳು ಎರಡು ಬಾರಿ ಹೆಲ್ಮೆಟ್‌ಗೆ ಬಡಿದಿದ್ದವು. ಆರಂಭದಲ್ಲಿ ವೈದ್ಯಕೀಯ ತಪಾಸಣೆಯ ಬಳಿಕ ಅವರು ಬ್ಯಾಟಿಂಗ್ ಮುಂದುವರಿಸಿದ್ದರು.