ಬೆಂಗಳೂರು: ಚಿನ್ನ ಖರೀದಿಸಲು ಯೋಚಿಸುತ್ತಿರುವವರಿಗೆ ಇಂದು ಕೊಂಚ ನೆಮ್ಮದಿಯ ಸುದ್ದಿ ಸಿಕ್ಕಿದೆ. ಸತತ ಏರಿಳಿತ ಕಾಣುತ್ತಿರುವ ಚಿನ್ನದ ಬೆಲೆ ಗುರುವಾರ ಮತ್ತೆ ಇಳಿಕೆಯಾಗಿದೆ. ನಿನ್ನೆ ₹70ರಷ್ಟು ಏರಿಕೆಯಾಗಿದ್ದ ಚಿನ್ನದ ದರ ಇಂದು ₹30ರಷ್ಟು ಕಡಿಮೆಯಾಗಿದೆ. ಬೆಳ್ಳಿ ಬೆಲೆಯಲ್ಲೂ ಇಳಿಕೆ ಕಂಡುಬಂದಿದ್ದು, ಸದ್ಯ ದೇಶದಲ್ಲಿ ಒಂದು ಗ್ರಾಂ ಬೆಳ್ಳಿ ದರ ₹235 ರಷ್ಟಿದೆ.