ಇತ್ತೀಚೆಗೆ ತೆರೆಕಂಡ ‘ಪ್ರೇಮದ ಊರಲಿ’ ಸಿನಿಮಾ ಭರ್ಜರಿಯಾಗಿ ಪ್ರದರ್ಶನ ಕಾಣುತ್ತಿದೆ. ಎಲ್ಲ ಕಡೆಗಳಲ್ಲೂ ಹೌಸ್​ಫುಲ್ ಆಗುತ್ತಿದೆ. ಇದರಿಂದ ಚಿತ್ರಮಂದಿರದವರು ಕೂಡ ಖುಷಿ ಆಗಿದ್ದಾರೆ. ಕಡಿಮೆ ಬಜೆಟ್​ನಲ್ಲಿ ನಿರ್ಮಾಣವಾದ ಈ ಸಿನಿಮಾ ಪ್ರತಿ ದಿನ ಕೋಟ್ಯಂತರ ರೂಪಾಯಿ ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ. ವಾರಾಂತ್ಯದಲ್ಲಿ ಕಲೆಕ್ಷನ್ ಇನ್ನೂ ಜಾಸ್ತಿ ಆಗುವ ಸಾಧ್ಯತೆ ಇದೆ.