ದೀಪಾವಳಿ ಹಬ್ಬದ ಶುಭ ಸಂದರ್ಭದಲ್ಲಿ ಚಿನ್ನದ ಬೆಲೆಯಲ್ಲಿ ಕೊಂಚ ಏರಿಕೆ ಕಂಡುಬಂದಿತ್ತು. ಭಾನುವಾರ, ನವೆಂಬರ್ 8ರಂದು ನಡೆದ ವಹಿವಾಟಿನಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಅಲ್ಪ ಪ್ರಮಾಣದಲ್ಲಿ ಹೆಚ್ಚಳವಾಗಿದ್ದವು. ಆದರೆ ಸೋಮವಾರ, ನವೆಂಬರ್ 9ರಂದು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ದರಗಳು ಇಳಿಕೆಯತ್ತ ಸಾಗಿವೆ.