ಜಿಐ ಟ್ಯಾಗ್ ಮಾನ್ಯತೆ ಪಡೆದಿರುವ ಕಲಬುರಗಿಯ ಪ್ರೀಮಿಯಂ ತೊಗರಿ ಬೇಳೆಯನ್ನು ಇದೇ ಮೊದಲ ಬಾರಿಗೆ ಮಾಲ್ಡೀವ್ಸ್‌ಗೆ ಯಶಸ್ವಿಯಾಗಿ ರಫ್ತು ಮಾಡಲಾಗಿದೆ. ಇದರಿಂದ ರೈತರಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಶೇ. 30ರಷ್ಟು ಹೆಚ್ಚಿನ ಬೆಲೆ ಸಿಗುತ್ತಿದೆ. ವಿಶಿಷ್ಟ ರುಚಿ ಮತ್ತು ಪೌಷ್ಟಿಕಾಂಶ ಹೊಂದಿರುವ ಈ ತೊಗರಿಯು ಜಾಗತಿಕ ಮಟ್ಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದೆ.