ಶ್ರೀಲಂಕಾದ ದಿಗ್ಗಜ ವೇಗಿ ಲಸಿತ್ ಮಾಲಿಂಗ ಮತ್ತು ಮುಂಬೈ ಇಂಡಿಯನ್ಸ್ ತಂಡದ ನಡುವೆ ದಶಕಕ್ಕೂ ಹೆಚ್ಚಿನ ಸುದೀರ್ಘ ನಂಟಿತ್ತು. 11 ವರ್ಷಗಳ ಕಾಲ ಮುಂಬೈ ಪರ ಆಟಗಾರನಾಗಿ ಹಲವು ಐತಿಹಾಸಿಕ ಜಯ ತಂದುಕೊಟ್ಟಿದ್ದ ಮಾಲಿಂಗ, 2018 ರಲ್ಲಿ ತಂಡದ ಬೌಲಿಂಗ್ ಮೆಂಟರ್ ಆಗಿ ಹೊಸ ಜವಾಬ್ದಾರಿ ವಹಿಸಿಕೊಂಡಿದ್ದರು.