ಬೆಂಗಳೂರು-ಮಂಗಳೂರು-ಕಾರವಾರ ಮಾರ್ಗದಲ್ಲಿ ಸಂಚರಿಸುವ ರೈಲುಗಳನ್ನು ಎಲೆಕ್ಟ್ರಿಕ್‌ ಎಂಜಿನ್‌ಗಳ ಮೂಲಕ ಓಡಿಸಲು ನೈಋತ್ಯ ರೈಲ್ವೆ ಮುಂದಾಗಿದೆ. ಘಟ್ಟ ಪ್ರದೇಶಗಳಲ್ಲಿಯೂ ಎಲೆಕ್ಟ್ರಿಕ್‌ ಗೂಡ್ಸ್‌ ಎಂಜಿನ್‌ಗಳನ್ನು ಬಳಸಲಾಗುವುದು. ಇದರಿಂದ ರೈಲ್ವೆ ಇಲಾಖೆಗೆ ಡೀಸೆಲ್‌ ವೆಚ್ಚದಲ್ಲಿ ಭಾರಿ ಉಳಿತಾಯವಾಗಲಿದೆ.