ಚಾಮರಾಜನಗರ: ಸತ್ಯಮಂಗಲ ಹುಲಿ ಸಂರಕ್ಷಿತ ಅರಣ್ಯದಲ್ಲಿ ಹಾದು ಹೋದ ರಾಷ್ಟ್ರೀಯ ಹೆದ್ದಾರಿಯಲ್ಲಿ ಪುಂಡರು ಕಾರಿನಿಂದ ಕೆಳಗಿಳಿದು ಆನೆಯನ್ನು (Elephant) ಹಿಂಬಾಲಿಸಿ ತೊಂದರೆ ಕೊಟ್ಟಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ರಾ.ಹೆ. 948 ರಲ್ಲಿ ರಾತ್ರಿ 9ರಿಂದ ಬೆಳಗ್ಗೆ 6ರವರೆಗೆ ವಾಹನ ಸಂಚಾರ ಸಂಪೂರ್ಣ ನಿಷೇಧ ಇದೆ.