ಗಾಯನ, ಸಿನಿಮಾದಲ್ಲಿ ಮಾತ್ರವಲ್ಲ, ಎಸ್‌ಪಿಬಿ ಕಿರುತೆರೆಯಲ್ಲೂ ಜನಪ್ರಿಯತೆ ಗಳಿಸಿದ್ದರು. ತಮಿಳು, ತೆಲುಗು ಧಾರಾವಾಹಿಗಳಲ್ಲಿ ನಟಿಸುವುದರ ಜೊತೆಗೆ ಅನೇಕ ಶೀರ್ಷಿಕೆ ಗೀತೆಗಳಿಗೆ ಧ್ವನಿಯಾಗಿದ್ದರು. ಸಂಗೀತ ರಿಯಾಲಿಟಿ ಶೋಗಳ ನಿರೂಪಕ ಹಾಗೂ ತೀರ್ಪುಗಾರರಾಗಿಯೂ ಗುರುತಿಸಿಕೊಂಡಿದ್ದರು.