ಪ್ರಧಾನಿ ಮೋದಿ ನೇತೃತ್ವದ ಸಂಪುಟ ಸಭೆಯಲ್ಲಿ ಸ್ಟ್ಯಾಂಡ್-ಅಪ್ ಇಂಡಿಯಾ ಯೋಜನೆಯನ್ನು 2031ರವರೆಗೆ ವಿಸ್ತರಿಸಲು ನಿರ್ಧರಿಸಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಮಹಿಳಾ ಉದ್ಯಮಿಗಳಿಗಾಗಿ 4,111 ಕೋಟಿ ರೂ. ಸಾಲ ಖಾತರಿ ನಿಧಿಗೆ ಅನುಮೋದನೆ ನೀಡಲಾಗಿದ್ದು, ಹೊಸ ಉದ್ಯಮಗಳಿಗೆ ಆರ್ಥಿಕ ನೆರವು ಒದಗಿಸಲಾಗುವುದು.