ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದೆ. ಚಲಿಸುತ್ತಿದ್ದ ಕಾರು ಕೆರೆಗೆ ಉರುಳಿ ಬಿದ್ದ ಪರಿಣಾಮ ಪುಟ್ಟ ಮಗು ಸೇರಿದಂತೆ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಮೃತರನ್ನು ಸಿದ್ದಾಪುರ (Siddapura) ಹೈಸ್ಕೂಲ್ ಪೈಸಾರಿ ನಿವಾಸಿಗಳಾದ ವಿಜೇಶ್ (36), ಅವರ ಪತ್ನಿ ಪಮಿತ (34) ಹಾಗೂ ನಾಲ್ಕು ವರ್ಷದ ಮಗಳು ಲಿಯ ಎಂದು ಗುರುತಿಸಲಾಗಿದೆ.