ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವು ಇಂದು ಜಗತ್ತಿನಾದ್ಯಂತ ಎಲ್ಲ ಕ್ಷೇತ್ರಗಳಲ್ಲೂ ಹವಾ ಸೃಷ್ಟಿಸುತ್ತಿದೆ. ಆದರೆ 80ರ ದಶಕದಲ್ಲಿಯೇ ಶಂಕರ್ ನಾಗ್ ನಿರ್ದೇಶನದ 'ಮಾಲ್ಗುಡಿ ಡೇಸ್' ಧಾರಾವಾಹಿಯಲ್ಲಿ ಕಥೆ ಬರೆಯುವ ಯಂತ್ರದ ಬಗ್ಗೆ ಪ್ರಸ್ತಾಪಿಸಲಾಗಿದ್ದ ದೃಶ್ಯವೊಂದು ಈಗ ವೈರಲ್ ಆಗಿದೆ.