ಬೆಳಗಾವಿ: ಗೋವಾದಿಂದ ಮಹಾರಾಷ್ಟ್ರ ಮಾರ್ಗವಾಗಿ ಕರ್ನಾಟಕಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 35 ಲಕ್ಷ ರು.ಮೌಲ್ಯದ ಗೋವಾ ಮದ್ಯವನ್ನು ಬಾಚಿ ಗ್ರಾಮದ ಬಳಿ ಅಬಕಾರಿ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಮೀನು ಸಾಗಿಸುವ ಇನ್ಸುಲೇಟೆಡ್ ಕಂಟೇನರ್‌ನಲ್ಲಿ ಮದ್ಯದ ಬಾಕ್ಸ್‌ಗಳನ್ನು ಅಡಗಿಸಿಟ್ಟು ಮದ್ಯವನ್ನು ಸಾಗಿಸಲಾಗುತ್ತಿತ್ತು.