ಮೈಸೂರು: ಸರ್ಕಾರದ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ರೈತರೊಬ್ಬರು ತಮ್ಮ ಸ್ವಂತ ಹಣದಿಂದಲೇ ರಸ್ತೆ ದುರಸ್ತಿ ಮಾಡಿದ್ದಾರೆ. ಸುಮಾರು ಮೂರು ಕಿಲೋಮೀಟರ್ ಉದ್ದದ ರಸ್ತೆಯನ್ನು ಸರಿಪಡಿಸಲು ಬರೋಬ್ಬರಿ ₹2 ಲಕ್ಷ ಹಣ ಖರ್ಚು ಮಾಡಿದ್ದಾರೆ.