ಬೆಂಗಳೂರು: ಹಾಸನಕ್ಕೆ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ (ಐಐಟಿ) ಮಂಜೂರಾದರೆ ಅಗತ್ಯವಿರುವ ಭೂಮಿಯನ್ನು ಒದಗಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. ಐಐಟಿ ಸ್ಥಾಪನೆಗೆ ಅಗತ್ಯ ಭೂಮಿಯನ್ನು ಜಿಲ್ಲಾಡಳಿತದ ವತಿಯಿಂದ ತಿಂಗಳೊಳಗೆ ಒದಗಿಸಲಾಗುವುದು ಎಂದು ಅಬಕಾರಿ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಂ. ಶಿವಲಿಂಗೇಗೌಡ ಭರವಸೆ ನೀಡಿದರು.