'ದೂಸ್ರಾ' ಸಿನಿಮಾ ಬಿಡುಗಡೆಗೆ ತಡೆ ಕೋರಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದ ಸೌರವ್ ಗಂಗೂಲಿಗೆ ಹಿನ್ನಡೆಯಾಗಿದೆ. 2002ರ ನ್ಯಾಟ್‌ವೆಸ್ಟ್ ಸರಣಿಯ ಫೈನಲ್ ಪಂದ್ಯದ ತಮ್ಮ ಐತಿಹಾಸಿಕ ಆಚರಣೆಯನ್ನು ಅನುಮತಿಯಿಲ್ಲದೆ ಬಳಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಆದರೆ, ಚಿತ್ರದ ಬಿಡುಗಡೆಗೆ ತಡೆ ನೀಡಲು ನಿರಾಕರಿಸಿರುವ ಕೋರ್ಟ್, ವಿಚಾರಣೆಯನ್ನು ಮುಂದೂಡಿದೆ.