ಬೌದ್ಧಿಕ ದೌರ್ಬಲ್ಯ ಮತ್ತು ರೂಪದ ಬಗ್ಗೆ ಅವಮಾನಗಳನ್ನು ಎದುರಿಸಿದ ದೀಪ್ತಿ ಜೀವಂಜಿ ಇಂದು ಅಂತರರಾಷ್ಟ್ರೀಯ ಮಟ್ಟದ ಕ್ರೀಡೆಯಲ್ಲಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. 2024ರ ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಕಂಚು ಹಾಗೂ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದಿರುವ ಇವರು, ಭಾರತಕ್ಕೆ ಕೀರ್ತಿ ತಂದಿದ್ದಾರೆ.