ದಾವಣಗೆರೆ: ನಗರದ ಹೊರವಲಯದಲ್ಲಿರುವ ಬಾಡಾ ಕ್ರಾಸ್‌ ಬಳಿ, ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಬೆಳಿಗ್ಗೆ ಕಾರೊಂದು ಸಿಎನ್‌ಜಿ ಸಾಗಣೆ ಕಂಟೇನರ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಘಟನೆ ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಿಸಿದಂತೆ ಹತ್ತು–ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.