ಬೆಂಗಳೂರು: ರಾಜ್ಯಕ್ಕೆ ಹೆಚ್ಚಿನ ಬಂಡವಾಳ ಆಕರ್ಷಿಸುವ ಗುರಿಯೊಂದಿಗೆ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ನೇತೃತ್ವದ ಉನ್ನತ ಮಟ್ಟದ ನಿಯೋಗವು ಸೋಮವಾರದಿಂದ (ಸೆ. 7)ಇದೇ 12ರವರೆಗೆ ಐದು ದಿನ ಫ್ರಾನ್ಸ್ ಮತ್ತು ನೆದರ್ಲೆಂಡ್ಸ್‌ಗೆ ತೆರಳಿದೆ. ನಿಯೋಗವು ಭಾನುವಾರ ನಸುಕಿನಲ್ಲಿ ಫ್ರಾನ್ಸ್‌ಗೆ ಪ್ರಯಾಣ ಬೆಳೆಸಿದೆ.