ಕ್ರಿಕೆಟ್ ಪಂದ್ಯಗಳಲ್ಲಿ ಆಟಗಾರರು ಸಿಡಿಸುವ ಸಿಕ್ಸರ್‌ಗಳು ಪ್ರೇಕ್ಷಕರ ಗ್ಯಾಲರಿಯಲ್ಲಿ ಕುಳಿತಿರುವ ಅಭಿಮಾನಿಗಳಿಗೆ ಅನಿರೀಕ್ಷಿತ ಉಡುಗೊರೆ ನೀಡುತ್ತವೆ. ಕೆಲವರು ಚೆಂಡನ್ನು ಹಿಡಿಯಲು ಮುಗಿಬಿದ್ದರೆ, ಇನ್ನೂ ಕೆಲವರು ಅದನ್ನು ಜೀವನಪೂರ್ತಿ ನೆನಪಿನಲ್ಲಿಟ್ಟುಕೊಳ್ಳುವ ಕ್ಷಣವನ್ನಾಗಿ ಮಾಡಿಕೊಳ್ಳುತ್ತಾರೆ.