ಬೆಂಗಳೂರು: ರಾಜ್ಯದಲ್ಲಿ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ರಾಜಕೀಯ ಪಕ್ಷಗಳು ಸಿದ್ಧತೆ ಆರಂಭಿಸಿವೆ. ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಸೇರಿದಂತೆ ಸ್ಥಳೀಯ ಮಟ್ಟದ ಚುನಾವಣೆಯಲ್ಲಿ ಪಕ್ಷದ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಜೆಡಿಎಸ್‌, ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳು ಕಾರ್ಯತಂತ್ರ ರೂಪಿಸುತ್ತಿವೆ.