ಮಡಿಕೇರಿ: ಕಾವೇರಿ (Cauvery River) ಜಲಾನಯನ ಪ್ರದೇಶದಲ್ಲಿ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಇದರಿಂದ ಹಲವು ತಿಂಗಳುಗಳ ಬಳಿಕ ಕೆಆರ್‌ಎಸ್ ಡ್ಯಾಮ್‌ಗೆ (KRS Dam) ಒಳಹರಿವಿನ ಪ್ರಮಾಣ ಏರಿಕೆ ಕಂಡಿದೆ. ಮಳೆ ಕೊರತೆಯಿಂದ ಡ್ಯಾಮ್‌ಗೆ ಒಳಹರಿವು ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು. ನೀರಿನ ಮಟ್ಟ 100 ಅಡಿಗಿಂತಲೂ ಕಡಿಮೆಗೆ ಕುಸಿದಿತ್ತು.