ನಾಡಹಬ್ಬ ದಸರಾವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಮೈಸೂರಿನಲ್ಲಿ ಜಂಬೂ ಸವಾರಿ ನೋಡಲು ಲಕ್ಷಾಂತರ ಜನರು ಸೇರಿದ್ದಾರೆ. ಈ ಬಾರಿ ಕನ್ನಡ ಚಿತ್ರರಂಗದ ಹಲವು ನಟ-ನಟಿಯರು ಕೂಡ ದಸರಾ ಹಬ್ಬದಲ್ಲಿ ಭಾಗಿ ಆಗಿದ್ದಾರೆ. ಅದರಿಂದಾಗಿ ತಾರಾ ಮೆರುಗು ಹೆಚ್ಚಿದೆ. ಎಲ್ಲರೂ ಟಿವಿ9 ಜೊತೆ ಮಾತನಾಡಿ ತಮ್ಮ ಸಂತಸ ಹಂಚಿಕೊಂಡಿದ್ದಾರೆ.