ಬೆಂಗಳೂರು: ಬರಗಾಲದಿಂದ ಸಂಕಷ್ಟದಲ್ಲಿರುವ ರೈತರಿಗಾಗಿ ಪ್ರತಿಪಕ್ಷ ಬಿಜೆಪಿ (BJP) ಇಟ್ಟಿರುವ ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸಿಲ್ಲ. ಬದಲಾಗಿ ರೈತರಿಗೆ ಕೇವಲ 2,500 ರೂ. ಪರಿಹಾರ ನೀಡಿ ಕೈತೊಳೆದುಕೊಂಡಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ (R Ashok) ಆರೋಪಿಸಿದ್ದಾರೆ.