ತಂಡದ ಪ್ರಮುಖ ಆಲ್‌ರೌಂಡರ್‌ ಮಿಚೆಲ್‌ ಸ್ಯಾಂಟ್ನರ್‌ ಬಲಗೈ ಮೂಳೆ ಮುರಿತದಿಂದಾಗಿ ಟೆಸ್ಟ್‌ ಸರಣಿಯಿಂದ ಹೊರಬಿದ್ದಿದ್ದಾರೆ. ಐದನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಬ್ಯಾಟಿಂಗ್‌ ಮಾಡುವಾಗ ಅವರಿಗೆ ಗಾಯವಾಗಿತ್ತು. ವೈದ್ಯಕೀಯ ಪರೀಕ್ಷೆಯಲ್ಲಿ ಮೂಳೆ ಮುರಿತ ದೃಢಪಟ್ಟ ಹಿನ್ನೆಲೆಯಲ್ಲಿ ಅವರು ಸರಣಿಯಿಂದ ದೂರ ಉಳಿಯಲಿದ್ದಾರೆ.