ತುಮಕೂರು: ಸಿದ್ಧಗಂಗಾ ಮಠ ಹಾಗೂ ಡಾ. ಶಿವಕುಮಾರ ಸ್ವಾಮೀಜಿ ಬಗ್ಗೆ ಅವಮಾನಕರ ಹೇಳಿಕೆ ನೀಡಿದ ನೈಸ್ ಸಂಸ್ಥೆ ಅಶೋಕ್‌ ಖೇಣಿ ವಿರುದ್ಧ ನಗರದ ಕನ್ನಡಪರ ಸಂಘಟನೆಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸಿ ಅವರ ಹೇಳಿಕೆ ಖಂಡಿಸಿದ್ದಾರೆ. ಎರಡು ದಿನದಲ್ಲಿ ಖೇಣಿ ಸಿದ್ಧಗಂಗಾ ಮಠಕ್ಕೆ ಬಂದು ಸ್ವಾಮೀಜಿಗಳ ಪಾದಕ್ಕೆ ನಮಸ್ಕರಿಸಿ ಕ್ಷಮೆಯಾಚಿಸಬೇಕು.