ಇಂಡಿಯನ್ ಪ್ರೀಮಿಯರ್ ಲೀಗ್‌ನ 20ನೇ ಆವೃತ್ತಿಯ ಮಿನಿ ಹರಾಜು ಡಿಸೆಂಬರ್ 16 ರಂದು ನಡೆಯುವುದು ಬಹುತೇಕ ಖಚಿತವಾಗಿದೆ. ಈಗಾಗಲೇ ಎಲ್ಲಾ ಫ್ರಾಂಚೈಸಿಗಳು ಹರಾಜಿಗೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಬಿಸಿಸಿಐ ಸೂಚನೆ ನೀಡಿದೆ.