ರುಮಟಾಯ್ಡ್ ಸಂಧಿವಾತ, ಸೋರಿಯಾಸಿಸ್, ಲೂಪಸ್, ಮಲ್ಟಿಪಲ್ ಸ್ಕ್ಲೆರೋಸಿಸ್‌ನಂತಹ ಆಟೋಇಮ್ಯೂನ್ ಕಾಯಿಲೆಗಳ ನಿರ್ವಹಣೆಯಲ್ಲಿ ಆಯುರ್ವೇದದ ಕೆಲವು ವಿಧಾನಗಳ ಕುರಿತು ಸಂಶೋಧನೆ ನಡೆಯುತ್ತಿದೆ. ಆಧುನಿಕ ಔಷಧಗಳು ಅನೇಕ ರೋಗಿಗಳಲ್ಲಿ ಕೆಲವು ಅಡ್ಡಪರಿಣಾಮಗಳನ್ನು ಉಂಟುಮಾಡುತ್ತಿದ್ದು ಜನರು ಪರ್ಯಾಯ ಚಿಕಿತ್ಸಾ ಪದ್ಧತಿಗಳ ಕಡೆ ಮುಖ ಮಾಡುತ್ತಿದ್ದಾರೆ.