ಕನ್ನಡ ಬಾವುಟವಿಡಿದರೂ ಯೂಟ್ಯೂಬರ್ ಹಾಗೂ ರಾಜಕೀಯ ವಿಶ್ಲೇಷಕ ಧ್ರುವ ರಾಠಿ ಮೇಲೆ ಕನ್ನಡಿಗರ ಕೋಪ ತಣ್ಣಗಾಗಿಲ್ಲ. ಈಚೆಗೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿನ ಲೋಪ ಹಾಗೂ ಭಾರತೀಯ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿ ದೇಶದಾದ್ಯಂತ ಕಾಕ್ರೋಚ್ ಜನತಾ ಪಾರ್ಟಿಯು ಪ್ರತಿಭಟನೆಗೆ ಕರೆ ನೀಡಿದೆ.